HomeKarnatakaBREAKING : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

BREAKING : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಎಕ್ಸ್ ಪ್ರೆಸ್ ಹೈವೇ  ವೀಕ್ಷಿಸಿದ್ದಾರೆ.

ಪೊಲೀಸರು ಹಾಗೂ ಅಧಿಕಾರಿಗಳೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸಿಎಂ ಆದ ಮೊದಲ ಬಾರಿಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ವೀಕ್ಷಿಸಿದರು. ನಂತರ ಅಧಿಕಾರಿಗಳು ಹಾಗೂ ಪೊಲೀಸರ ಬಳಿ ಹೈವೇ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯ ತಾಲೂಕಿನ ಗುಮ್ಮಡಹಳ್ಳಿ ಗೇಟ್ ಹೆದ್ದಾರಿ ವೀಕ್ಷಣೆ ನಡೆಸಿದ್ದಾರೆ. ಅಪಘಾತ ಹೆಚ್ಚಾದ ಹಿನ್ನೆಲೆ ಅಳವಡಿಸಿದ 360° ಕ್ಯಾಮರಾ ವೀಕ್ಷಿಸಿದ್ದಾರೆ. ನಂತರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳ ಪ್ರಯೋಗ ಕೈಗೊಂಡಿದ್ದು, ಈ ಉಪಕ್ರಮಗಳು ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ ಎಂದು ರಾಜ್ಯ ರಸ್ತೆ ಸುರಕ್ಷಿತ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಹೆಕ್ಸ್ ಪ್ರೆಸ್ ಹೈವೇಯಲ್ಲಿ ವಾಹನಗಳ ವೇಗದ ಮೇಲೆ ಟ್ರಾಫಿಕ್ ಪೊಲೀಸರು ಕಣ್ಣಿಟ್ಟಿದ್ದಾರೆ. ಎಎನ್ಪಿಆರ್ ಕ್ಯಾಮೆರಾ ಅಳವಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಅಪಘಾತ ತಡೆಗೆ ಎ.ಎನ್.ಪಿ.ಆರ್. ಕ್ಯಾಮೆರಾ ಅಳವಡಿಸಲಾಗಿದೆ. ಕ್ಯಾಮರಾ ಬಳಸಿ ಸಂಚಾರ ಪೊಲೀಸರು ದಂಡ ವಿಧಿಸತೊಡಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular