HomeKarnatakaGruha Lakshmi Scheme : ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ...

Gruha Lakshmi Scheme : ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಅವರು ಅರ್ಜಿ ಸಲ್ಲಿಸಲು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 16 ರಂದು ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದರು.

ಈಗಾಗಲೇ 70 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಹಣ ವಸೂಲಿ ಮಾಡಿದರೆ ಸರ್ಕಾರದ ಗಮನಕ್ಕೆ ತನ್ನಿ ಎಂದರು. ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular