
ಮೃತ ಬಾಲಕನನ್ನು ಮೊಯಿನುದ್ದೀನ್ (13) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಯಿಂದ ಹೊರಕ್ಕೆ ಹೋಗಿದ್ದ ಬಾಲಕ ತನ್ನ ಸ್ನೇಹಿತರ ಜೊತೆ ಪಿಳ್ಳಪ್ಪನಕಟ್ಟೆ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಆದರೆ ಮೊಯಿನುದ್ದೀನ್ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತಪಟ್ಟ ಬಾಲಕನ ಮೃತದೇವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

