ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರ ಬಡಾವಣೆಯ 5ನೇ ಕ್ರಾಸ್ ಸುಭಾಷ್ ನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ.
ಜ್ಞಾನೇಶ್ವರ(45) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ರಸ್ತೆ ಬದಿಯಲ್ಲಿ ಬ್ಯಾಗ್ ರಿಪೇರಿ ಮಾಡಿಕೊಂಡಿದ್ದ ಜ್ಞಾನೇಶ್ವರ್ ವಿದ್ಯಾನಗರದಲ್ಲಿ ವಾಸವಾಗಿದ್ದು, ಮನೆ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿಯ ಸೋದರ ಮಾವ ನಾಗರಾಜು ನಡುವೆ ಜಗಳವಾಗಿದೆ. ಜಗಳದ ವೇಳೆ ತಳ್ಳಿದ್ದರಿಂದ ತಲೆಗೆ ಪೆಟ್ಟು ಬಿದ್ದು ಜ್ಞಾನೇಶ್ವರ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.