HomeIndiaನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, ಕಾರಿನ ಬಳಿ ನಿಂತಿದ್ದ ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದಿಪುರ ಮೆಟ್ರೋ ನಿಲ್ದಾಣದ ರೋಹ್ಟಕ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಇನ್ಸ್ ಪೆಕ್ಟರ್ ತಮ್ಮ ಕಾರಿನಲ್ಲಿ ಅದೇ ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣಕ್ಕೆ ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟ್ರಕ್ ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ಜಗಬೀರ್ ಸಿಂಗ್ ಮೃತ ಪೊಲೀಸ್ ಇನ್ಸ್ ಪೆಕ್ಟರ್. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular