HomeKarnatakaಬಹುಕೋಟಿ ವಂಚನೆ: ಹುಬ್ಬಳ್ಳಿ ಮೂಲದ ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇಡಿ

ಬಹುಕೋಟಿ ವಂಚನೆ: ಹುಬ್ಬಳ್ಳಿ ಮೂಲದ ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇಡಿ

ಹುಬ್ಬಳ್ಳಿ; ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ ಆಸ್ತಿ ಜಪ್ತಿ ಮಾಡಿರುವ ಘಟನೆ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಶೀತಲ್ ಕುಮಾರ್, ಜಿನೇಂದ್ರ ಮಗ್ದುಮ್ ಎಂಬುವವರು ಸ್ಟಾರ್ ಏರ್ ಲೈನ್ಸ್ ಮಾಲೀಕ ಸಂಜಯ್ ಘೋಡಾವತ್ ಎಂಬುವವರಿಗೆ ವಂಚನೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೀತಲ್ ಕುಮಾರ್ ಹಾಗೂ ಜಿನೇಂದ್ರ ಮಗ್ದುಮ್ ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಬರೋಬ್ಬರಿ 525 ಕೋಟಿ ರೂಪಾಯಿ ಹಣವನ್ನು ತಮ್ಮ ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ ಬಗ್ಗೆ ಸಂಜಯ್ ಘೋಡಾವತ್ ಹುಬ್ಬಳ್ಳಿಯ ಅಶೋಕ ನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು.

ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಾಲಯ ಜಾರಿ ನಿರ್ದೇಶನಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಶೀತಲ್ ಕುಮಾರ್, ಜಿನೇಂದ್ರ ಮುಗ್ದುಮ್ ಅವರ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಇಬ್ಬರು ಉದ್ಯಮಿಗಳು ಹೊಂದಿದ್ದ ವಿಂಡ್ ಮಿಲ್, ಅಪಾರ್ಟ್ ಮೆಂಟ್, ಮನೆ ಸೇರಿದಂತೆ ಒಟ್ಟು 12 ಆಸ್ತಿಗಳನ್ನು ಜಪ್ತಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular