ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯಕ್ ಡಿ.ವೈ.ಎಸ್.ಪಿ.ಗೆ ದೂರು ನೀಡಿದ್ದಾರೆ.
ಹೊನ್ನಾವರ ಫ್ರೆಂಡ್ಸ್ ವಾಟ್ಸಾಪ್ ಗ್ರೂಪ್ ನಲ್ಲಿ ನೆಹರು ಅವರ ಫೋಟೋದೊಂದಿಗೆ ಅಶ್ಲೀಲ ಮತ್ತು ಆಕ್ಷೇಪಾರ್ಹ ಮಹಿಳೆಯರ ಫೋಟೋ ಜೋಡಿಸಿ ಶೇರ್ ಮಾಡಲಾಗಿದೆ ಎಂದು ದೂರಲಾಗಿದೆ.
ನೆಹರು ತೇಜೋವಧೆ, ಕಾಂಗ್ರೆಸ್ ಪಕ್ಷದ ಘನತೆಗೆ ಕುಂದುಂಟು ಮಾಡುವ ಉದ್ದೇಶದಿಂದ ಇಂತಹ ಕೃತ್ಯವೆಸಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಂದು ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.