HomeKarnatakaಬಿಜೆಪಿಗೆ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್: 40% ಕಮಿಷನ್ ತನಿಖೆ…?

ಬಿಜೆಪಿಗೆ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್: 40% ಕಮಿಷನ್ ತನಿಖೆ…?

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾರಣವಾಗಿದ್ದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣ ಮೊದಲಾದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದ ಆರೋಪಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಹಗರಣದ ತನಿಖೆಗಾಗಿ ನ್ಯಾಯಮೂರ್ತಿ ವೀರಪ್ಪ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ ವಿಶೇಷ ತನಿಕಾ ದಳ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ 40% ಕಮಿಷನ್ ಆರೋಪ ಸಂಬಂಧ ನ್ಯಾಯಾಂಗ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

ಈ ಮೂಲಕ ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 40 ಪರ್ಸೆಂಟ್ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular