ಬೆಂಗಳೂರು ಗ್ರಾಮಾಂತರ : ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿಗಳು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿಗಳು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಮೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೃತರನ್ನು ವಿಜಯಪುರ ಪಟ್ಟಣದ ರಮೇಶ್ (28) ಹಾಗೂ ಸಹನಾ (26) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.