HomeKarnatakaBIGG NEWS : ಸಿಎಂ ಸಿದ್ದರಾಮಯ್ಯ `ಕೇರಳ ಫೈಲ್ಸ್’ ಸಿನಿಮಾ ನೋಡಬೇಕು : ನಳಿನ್ ಕುಮಾರ್...

BIGG NEWS : ಸಿಎಂ ಸಿದ್ದರಾಮಯ್ಯ `ಕೇರಳ ಫೈಲ್ಸ್’ ಸಿನಿಮಾ ನೋಡಬೇಕು : ನಳಿನ್ ಕುಮಾರ್ ಕಟೀಲ್

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ ಹಿಂದೂ ವಿರೋಧಿ ನೀತಿ ಹೆಚ್ಚಾಗುತ್ತಿದೆ. ಭಯೋತ್ಪಾದಕರ ಪರ, ಹಿಂದೂ ವಿರೋಧಿ ಸಿದ್ದರಾಮಯ್ಯ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿಎಂ, ಗೃಹ ಸಚಿವರು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕೇರಳ ಫೈಲ್ಸ್ ಸಿನಿಮಾ ನೋಡಲಿ, ಉಡುಪಿಯಲ್ಲಿ ನಡೆದ ಘಟನೆ ಕೇರಳ ಫೈಲ್ಸ್ ಸಿನಿಮಾ ರೀತಿ ಇದೆ. ಕಾಂಗ್ರೆಸ್ ಗೆದ್ದಾಗಲೇ ಪಾಕಿಸ್ತಾನ ಪರ ಜಯಘೋಷ ಕೂಗಿದ್ದರು. ಆದರೆ ಈವರೆಗೆ ಅವರನ್ನು ಸಿದ್ದರಾಮಯ್ಯ ಜೈಲಿಗೆ ಹಾಕಲಿಲ್ಲ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular