ಮಂಗಳೂರು : ಮಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಗಳೂರಿನ ಹೊರವಲಯದ ಪಡೀಲ್ ಅಳಪೆ ಎಂಬಲ್ಲಿ ಆಯತಪ್ಪಿ ಹೊಂಡಕ್ಕೆ ಬಿದ್ದು, ವರುಣ್ (27), ವೀಕ್ಷಿತ್ (28) ಎಂಬ ಯುವಕರು ಸಾವನ್ನಪ್ಪಿದ್ದಾರೆ.
ಕಂಕನಾಡಿ ಟೌನ್ ಠಾಣಾ ವ್ಯಾಪ್ತಿಯ ಅಳಪೆ ಪಡ್ಪು ಎಂಬಲ್ಲಿ ರೈಲ್ವೆ ಕಾಮಗಾರಿ ಸಂಬಂಧ ತೆಗೆದಿದ್ದ ಹೊಂಡ ಮಳೆಯಿಂದ ತುಂಬಿಕೊಂಡಿತ್ತು. ಈ ಹೊಂಡದಲ್ಲಿ ಇಬ್ಬರು ಯುವಕರು ಆಯತಪ್ಪಿ ಬಿದ್ದು ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಶವಗಳನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.