ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ 19 ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ವಿಚಾರದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡುವ ಸಂಬಂಧ ಚರ್ಚೆ ನಡೆಸಲು ಹೈಕಮಾಂಡ್ ಕರೆದಿದೆ. ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಬದಲಾವಣೆ ಮಾಡುವ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಾವು ಹೋಗಿ ಕೂರಲು ಆಗುವುದಿಲ್ಲ. ನಾವು ಸಚಿವರಾಗಿದ್ದೇವೆ. ನಮ್ಮ ಸ್ಥಾನದಲ್ಲಿ ಬೇರೆಯವರಿಗೆ ಕೂರಿಸಬೇಕು. ಪೂರ್ಣಾವಧಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕಾತಿ ನಡೆಯಲಿದೆ. ವರಿಷ್ಠರ ಸಭೆಯಲ್ಲಿ ಹೊಸ ಟೀಂ ಬಗ್ಗೆ ಚರ್ಚೆ ನಡೆಯಲಿದೆ ಎಂದರು.