ಹಿಂದಿ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಖ್ಯಾತ ನಟಿ ತಾಪ್ಸಿ ಪನ್ನು ಇಂದು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
2010 ರಲ್ಲಿ ತೆರೆಕಂಡ ತೆಲುಗಿನ ‘ಝುಮ್ಮಂದಿ ನಾದಂ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ನಟಿ ತಾಪ್ಸಿ ಪನ್ನು ಅವರಿಗೆ ಟಾಲಿವುಡ್ ನಲ್ಲಿ ಸಾಕಷ್ಟು ಆಫರ್ ಗಳು ಬಂದವು. ಅದೇ ವರ್ಷದಂದು ನಾಲ್ಕು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅಭಿನಯಿಸಿದರು.
ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ತಾಪ್ಸಿ ಪನ್ನು ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದ ಬೇಡಿಕೆ ನಟಿಯಾಗಿದ್ದಾರೆ. ಇತ್ತೀಚೆಗೆ ‘ವೋ ಲಡ್ಕಿ ಹೈ ಕಹಾನ್’ ಶೂಟಿಂಗ್ ಪೂರ್ಣಗೊಳಿಸಿರುವ ತಾಪ್ಸಿ ಪನ್ನು ಬಾಲಿವುಡ್ ಬಾದಶಾ ಶಾರುಕ್ ಖಾನ್ ಅವರ ‘ಡಂಕಿ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.