HomeKarnatakaBIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ.

ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. 21 ವರ್ಷದ ಮಂಜುಳಾ ಮೃತರು. ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಮಂಜುಳಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ನೀರಿನ ಟ್ಯಾಂಕ್ ತೊಳೆಯುತ್ತಿರಲಿಲ್ಲ. ಇದರಿಂದಾಗಿ ಟ್ಯಾಂಕ್ ನಲ್ಲಿ ಕಸ, ಕಡ್ಡಿಗಳು ಬಿದ್ದು ತುಂಬಿಕೊಂಡಿದ್ದು, ಗ್ರಾಮಸ್ಥರು ಅದೇ ನೀರು ಕುಡಿಯಬೇಕಾದ ಅನಿವಾರ್ಯತೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular