ಮಂಗಳೂರು : 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ-ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣವನ್ನು ಮರು ತನಿಖೆಗೆ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ. ಇದರ ನಡುವೆ ನಟ ದುನಿಯಾ ವಿಜಯ್ ಪ್ರಕರಣದ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ದ ಎಂದು ನಟ ದುನಿಯಾ ವಿಜಯ್ ಟ್ವೀಟ್ ಮಾಡಿದ್ದಾರೆ.
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ#Justiceforsoujanya pic.twitter.com/wlxF84dHY4
— Duniya Vijay kumar (@officialsalaga) August 1, 2023
ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಕೋರ್ಟ್ ಆದೇಶದ ನಂತರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಆಗ್ರಹ ಕೇಳಿಬಂದಿದೆ.
ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ 2012 ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ನಂತರ ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಅನುಮಾನದ ಮೇರೆಗೆ ಸಮೀಪದ ಮನೆಯಲ್ಲಿ ವಾಸವಿದ್ದ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು.

