ಮಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಮಂಗಳೂರು ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಸೌಜನ್ಯಾಳ ಪೋಷಕರು ಮರು ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕಾನೂನು ಪ್ರಕಾರ ಏನಾಗಬೇಕು ಅಂತ ನೋಡಿ ಮುಂದಿನ ನಿರ್ಧಾರವನ್ನು ಮಾಡುತ್ತೇವೆ. ಸೌಜನ್ಯಾಳ ಪೋಷಕರು ಕೋರ್ಟ್ನ ಆದೇಶ ಕಾಪಿ ತಂದು ಕೊಟ್ಟಿದ್ದಾರೆ. ನಾನು ಒಬ್ಬ ಲಾಯರ್ ಆಗಿ ಜಡ್ಜ್ಮೆಂಟ್ ಕಾಪಿಯನ್ನು ಓದಿ ನೋಡುತ್ತೇನೆ, ಬಳಿಕ ಹೈಕೋರ್ಟ್ಗೆ ಮೇಲ್ಮನವಿಗೆ ಹೋಗಲು ಅವಕಾಶ ಇದೆಯೇ ಎಂಬುದನ್ನು ನೋಡುತ್ತೇನೆ’ ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಬೇಕೆಂದು ವಿವಿಧ ಸಂಘಟನೆಗಳ ಸದಸ್ಯರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. 2012,ಅಕ್ಟೋಬರ್ 9 ರಂದು ನಡೆದಿದ್ದ ಸೌಜನ್ಯ ಹತ್ಯೆ ಕುರಿತಂತೆ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಕೂಡ ಪ್ರತಿಭಟನೆ ನಡೆದಿದೆ. ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆಗೆ ಭಾರಿ ಕೂಗು ಕೇಳಿ ಬರುತ್ತಿದೆ.
ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ
ನಟ ದುನಿಯಾ ವಿಜಯ್ ಕೂಡ ಸೌಜನ್ಯ ಪ್ರಕರಣದ ಬಗ್ಗೆ ದನಿ ಎತ್ತಿದ್ದು, ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ.
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ದ ಎಂದು ನಟ ದುನಿಯಾ ವಿಜಯ್ ಟ್ವೀಟ್ ಮಾಡಿದ್ದಾರೆ.