ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ನಿರಂತರವಾಗಿ 4 ವರ್ಷಗಳ ಕಾಲ ಅತ್ಯಾಚಾರವೆಸಗಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೆಳಕಿಗೆ ಬಂದಿದೆ.

ದಲಿತ ಬಾಲಕಿಯೊಬ್ಬಳ ಮೇಲೆ ಕಳೆದ ನಾಲ್ಕು ವರ್ಷಗಳಿಂದ ಐವರು ಕಾಮುಕರು ಅಟ್ಟಹಾಸ ಮೆರೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೋಕ್ಸೋ ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು ಮೂವರು ಆರೊಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು 24 ವರ್ಷದ ಅಕ್ಷಯ್ ದೇವಾಡಿಗ, 30 ವರ್ಷದ ಕಮಲಾಕ್ಷ ಬೆಳ್ಚಾಡ, 28 ವರ್ಷದ ಸುಕುಮಾರ್ ಬೆಳ್ಚಾಡ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಆರೋಪಿಗಳಾದ ಜಯಪ್ರಕಾಶ್, ರಾಜ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

2019ರಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಕಳೆದ ತಿಂಗಳು ಬಾಲಕಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಇದೀಗ ಪೋಷಕರು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read