HomeKarnatakaಯಜಮಾನಿಯರೇ ಗಮನಿಸಿ : 'ಗೃಹಲಕ್ಷ್ಮಿ'ಯ 2000 ಹಣ ಯಾವಾಗ ಸಿಗುತ್ತೆ..? ಇಲ್ಲಿದೆ ಮಾಹಿತಿ

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಯ 2000 ಹಣ ಯಾವಾಗ ಸಿಗುತ್ತೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು.

ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.ರಾಜ್ಯ ಸರ್ಕಾರದ ಮೂಲಗಳ ಪ್ರಕಾರ ಆಗಸ್ಟ್ 15 ಅಥವಾ 16 ರಂದು ಯಜಮಾನಿಯರ ಖಾತೆಗೆ ಹಣ ಜಮೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆಗಸ್ಟ್ 16 ಅಥವಾ 17 ರಂದು ಮನೆಯ ಯಜಮಾನಿಯ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ ಹಣ ಜಮಾ ಆಗಲಿದೆ.

ಮನೆ ಯಜಮಾನಿ ಮೃತಪಟ್ಟಿದ್ರೆ ‘ಗೃಹಲಕ್ಷ್ಮಿ’ ಯ 2 ಸಾವಿರ ಯಾರಿಗೆ ಸಿಗುತ್ತೆ..? ಅಂತಹ ಸಂದರ್ಭಗಳಲ್ಲಿ ಏನು ಮಾಡಬೇಕು. ಇಲ್ಲಿದೆ ಮಾಹಿತಿ. ಅರ್ಜಿ ಸಲ್ಲಿಸುವ ಮೊದಲು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಳ್ಳಬೇಕು, ಮನೆ ಯಜಮಾನಿ ಮೃತಪಟ್ಟರೆ ..ನಂತರದ ಮನೆ ಯಜಮಾನಿ ಯಾರು..? ಅವರ ಹೆಸರನ್ನು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಬೇಕು. ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಯಾವ ಮಹಿಳೆಯ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ಬದಲಾವಣೆ ಮಾಡಿಕೊಂಡರೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತೆ, ಯೋಜನೆಗೆ ಕಡೆ ದಿನಾಂಕ ತಿಳಿಸದೇ ಇರುವುದರಿಂದ ಎಲ್ಲಾ ದಾಖಲೆ ಸರಿಪಡಿಸಿಕೊಂಡು ತಿದ್ದುಪಡಿ ಮಾಡಿಕೊಂಡು ಅರ್ಜಿ ಸಲ್ಲಿಸುವುದು ಒಳ್ಳೆಯದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular