ಪಾಟ್ನಾ: ಬಿಹಾರ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯನ್ನು ಪಾಟ್ನಾ ಹೈಕೋರ್ಟ್ ಎತ್ತಿ ಹಿಡಿದಿದೆ. ಜಾತಿವಾರು ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಪಾರ್ಥ ಸಾರಥಿ ಅವರ ಪೀಠ ಇಂದು ತೀರ್ಪು ನೀಡಿದೆ.
ಸಮೀಕ್ಷೆಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರವು ಈ ವರ್ಷದ ಜನವರಿಯಲ್ಲಿ ಮೊದಲ ಹಂತದ ಎಣಿಕೆ ಕಾರ್ಯವನ್ನು ಕೈಗೆತ್ತಿಕೊಂಡಿತು. ಎರಡನೇ ಹಂತದ ಸಮೀಕ್ಷೆಯು ಏಪ್ರಿಲ್ 15 ರಂದು ಪ್ರಾರಂಭವಾಯಿತು, ಜನರ ಜಾತಿ ಮತ್ತು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳಿಗೆ ಸಂಬಂಧಿಸಿದ ಡೇಟಾವನ್ನು ಸಂಗ್ರಹಿಸುವುದರ ಮೇಲೆ ಕೇಂದ್ರೀಕರಿಸಿದೆ. ಈ ವರ್ಷದ ಮೇ ವೇಳೆಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಲು ಯೋಜಿಸಲಾಗಿತ್ತು. ಆದರೆ, ಮೇ 4ರಂದು ಹೈಕೋರ್ಟ್ ಜಾತಿ ಗಣತಿಗೆ ತಡೆ ನೀಡಿತ್ತು. ಈಗ ಬಿಹಾರ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯನ್ನು ಪಾಟ್ನಾ ಹೈಕೋರ್ಟ್ ಎತ್ತಿ ಹಿಡಿದಿದೆ.