HomeKarnatakaಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಸೈಬರ್ ಕ್ರೈಂ ಠಾಣೆಯಲ್ಲಿ ದೂರು

ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ; ಸೈಬರ್ ಕ್ರೈಂ ಠಾಣೆಯಲ್ಲಿ ದೂರು

ನೀತಿ ಸಂಹಿತೆ ಉಲ್ಲಂಘನೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣ ರದ್ದು- Kannada Prabha

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಇದರಲ್ಲಿ ಆಕ್ಷೇಪಾರ್ಹ ಬರಹಗಳನ್ನು ಬರೆಯಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಫೇಸ್ಬುಕ್ ನಕಲಿ ಖಾತೆಯಲ್ಲಿ ಆಕ್ಷೇಪಾರ್ಹ ಬರಹಗಳನ್ನು ಬರೆದು ಆ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸಲು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾವು ಫೇಸ್ಬುಕ್ ಖಾತೆಯಾಗಲಿ ಅಥವಾ ಇತರೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರುವುದಿಲ್ಲ ಎಂದು ಡಾ. ಕಲ್ಲಡ್ಕ ಪ್ರಭಾಕರ ಭಟ್ ದೂರಿನಲ್ಲಿ ತಿಳಿಸಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular