ಪುಣೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರಧಾನಿ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಪುಣೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಪರೋಕ್ಷವಾಗಿ ಟೀಕಿಸಿದ್ದಾರೆ.
ಸ್ವಹಿತಾಸಕ್ತಿಗೆ ಯಾವುದೇ ಪಕ್ಷ ರಾಜ್ಯದ ಬೊಕ್ಕಸ ಖಾಲಿ ಮಾಡಿದರೆ ಅದರ ಪರಿಣಾಮ ಅಭಿವೃದ್ಧಿ ಯೋಜನೆಗಳ ಮೇಲಾಗುತ್ತದೆ ಎಂಬುದು ಕರ್ನಾಟಕದಲ್ಲಿ ಕಡಿಮೆ ಅವಧಿಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಇಡೀ ವಿಶ್ವದಲ್ಲಿ ಹೂಡಿಕೆದಾರರ ಕೇಂದ್ರ ಸ್ಥಾನವಾಗಿದ್ದು, ಐಟಿ ವಲಯದ ಕೇಂದ್ರ ಸ್ಥಾನವಾಗಿದೆ. ಆದರೆ, ರಾಜ್ಯ ಸರ್ಕಾರ ಘೋಷಿಸಿದ ಕೆಲವು ಯೋಜನೆಗಳು ಅಲ್ಪಾವಧಿಯಲ್ಲಿ ಅಡ್ಡ ಪರಿಣಾಮಗಳು ಬೀರಿವೆ. ಬೆಂಗಳೂರು ಅಭಿವೃದ್ಧಿಗೆ ಹಣವಿಲ್ಲವೆಂದು ಸರ್ಕಾರವೇ ಒಪ್ಪಿಕೊಂಡಿದೆ. ಯಾವುದೇ ಒಂದು ಪಕ್ಷ ಸ್ವಹಿತಾಸಕ್ತಿಗೆ ರಾಜ್ಯದ ಬೊಕ್ಕಸ ಖಾಲಿ ಮಾಡಿದರೆ ಅದರ ಪರಿಣಾಮ ರಾಜ್ಯದ ಜನರ ಮೇಲಾಗುತ್ತದೆ. ಇಂತಹವುದೇ ಪರಿಸ್ಥಿತಿ ರಾಜಸ್ಥಾನದಲ್ಲೂ ಇದ್ದು, ರಾಜಸ್ಥಾನದಲ್ಲಿ ಕೂಡ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದೆ ಎಂದು ಮೋದಿ ಟೀಕಿಸಿದ್ದಾರೆ.