ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಸಿಎಂ ಮಹತ್ವದ ಹೇಳಿಕೆ

ಮಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಅರಣ್ಯ ಸಚಿವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು ವಿಷಯ ಪ್ರಸ್ತಾಪಿಸಿದ್ದಾರೆ.

ಶಾಸಕ ಹರೀಶ್ ಪೂಂಜಾ ಅವರು ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ಬಗ್ಗೆ ಅರಣ್ಯ ಸಚಿವರು ಮಾತನಾಡಿದ್ದಾರೆ ಎಂದು ತಿಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ತಮ್ಮ ಹೇಳಿಕೆ ಬಗ್ಗೆ ಅರಣ್ಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಅದನ್ನು ಓದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಹೌದು ಓದಿದ್ದೇನೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅರಣ್ಯ ಸಚಿವರು ಮೊದಲು ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ವೇಳೆ ವಸತಿ ಪ್ರದೇಶಕ್ಕೆ ಸಮಸ್ಯೆ ಆಗುವುದಿಲ್ಲ. ಯಾವುದೇ ಕಾರಣಕ್ಕೂ ಸಮಸ್ಯೆ ಆಗದು ಎಂದು ಸಿಎಂ ತಿಳಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದರ ಬಗ್ಗೆ ಬಿಜೆಪಿ ಶಾಸಕರು ಶ್ಲಾಘಿಸಿದ್ದಾರೆ. ನಿಮ್ಮ ಹೇಳಿಕೆಯಿಂದ ಸಮಾಧಾನ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read