alex Certify ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

Raichuru: ಗಾಂಜಾ ಮಿಶ್ರಿತ ಚಾಕಲೇಟ್ ಮಾರಟ- ಇಬ್ಬರು ಆರೋಪಿಗಳ ಬಂಧನ..! - NAMMAKUDLA NEWS - ನಮ್ಮಕುಡ್ಲ ನ್ಯೂಸ್

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ 2.66 ಕೆಜಿ ಗಾಂಜಾ ಮಿಶ್ರಿತ ಚಾಕೊಲೇಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಬಕಾರಿ ನಿರೀಕ್ಷಕ ಹನುಮಂತ ಗುತ್ತೇದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ 482 ಗಾಂಜಾ ಮಿಶ್ರಿತ ಚಾಕೊಲೇಟ್ ದೊರೆತಿದ್ದು, ರಾಚಯ್ಯಸ್ವಾಮಿ, ಅಮರಯ್ಯ ಸ್ವಾಮಿ ಎಂಬುವರನ್ನು ಬಂಧಿಸಲಾಗಿದೆ. ಇವರು ಉತ್ತರ ಪ್ರದೇಶ ಮೂಲದವರಿಂದ ಚಾಕೊಲೇಟ್ ಗಳನ್ನು ತಂದು ವಿವಿಧ ಬಡಾವಣೆಗಳಲ್ಲಿ 50 ರಿಂದ 100 ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...