ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದ ಕರಾವಳಿ ಪ್ರದೇಶ ಹೊರತುಪಡಿಸಿ ಉಳಿದೆಡೆ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 3ರಿಂದ 5ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಜೂನ್ ತಿಂಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ, ಜುಲೈನಲ್ಲಿ ಭಾರಿ ಮಳೆಯಾಗಿದೆ. ವಾಡಿಕೆಗಿಂತ ಶೇಕಡ 29 ರಷ್ಟು ಹೆಚ್ಚುವರಿ ಮಳೆಯಾಗಿದೆ.