HomeKarnatakaದಂಪತಿ ಜಗಳದ ವೇಳೆ ಆಘಾತಕಾರಿ ಕೃತ್ಯ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

ದಂಪತಿ ಜಗಳದ ವೇಳೆ ಆಘಾತಕಾರಿ ಕೃತ್ಯ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಗಲಾಟೆ ವೇಳೆಯಲ್ಲಿ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದಾನೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತ್ನಿ ಪುಷ್ಪಾ ಎಡಗೈ ಬೆರಳನ್ನೇ ಪತಿ ವಿಜಯಕುಮಾರ್ ಕಚ್ಚಿ ತಿಂದಿದ್ದಾನೆ. 23 ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದು, ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ವಿಜಯಕುಮಾರ್ ಕಿರುಕುಳ ನೀಡುತ್ತಿದ್ದ. ಹೀಗಾಗಿ ಪುಷ್ಪಾ ಮಗನ ಜೊತೆ ಬೇರೆ ಮನೆ ಮಾಡಿ ವಾಸವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 28ರಂದು ಪುಷ್ಪಾ ವಾಸವಾಗಿರುವ ಮನೆಗೆ ಹೋಗಿದ್ದ ವಿಜಯಕುಮಾರ್ ಜಗಳವಾಡಿದ್ದಾನೆ. ಗಲಾಟೆ ವೇಳೆಯಲ್ಲಿ ಪತ್ನಿ ಪುಷ್ಪಾಳ ಎಡಗೈ ಬೆರಳನ್ನೇ ಪತಿ ವಿಜಯಕುಮಾರ್ ಕಚ್ಚಿ ತಿಂದಿದ್ದಾನೆ. ರೌಡಿಶೀಟರ್ ಗಳನ್ನು ಬಿಟ್ಟು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರೋಪಿ ವಿಜಯಕುಮಾರನನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular