ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು.
ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಕುಟುಂಬದ ಹಿರಿಯ ಮಹಿಳೆ ಹೆಸರು ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ, ಇಲ್ಲವಾದಲ್ಲಿ ಅದನ್ನು ತಿದ್ದುಪಡಿ ಮಾಡಿಸಬೇಕು.ಆಧಾರ್ ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುತ್ತದೆ ಅದೇ ಖಾತೆಗೆ ಹಣ ವರ್ಗಾವಣೆ ಆಗುವುದರಿಂದ ನೀವು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ಸೀಡಿಂಗ್ ಮಾಡಿರಬೇಕು. ಆಗಸ್ಟ್ 16, ಅಥವಾ 17 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ಜಮಾ ಆಗುತ್ತದೆ.
ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.ರಾಜ್ಯ ಸರ್ಕಾರದ ಮೂಲಗಳ ಪ್ರಕಾರ ಆಗಸ್ಟ್ 15 ಅಥವಾ 16 ರಂದು ಯಜಮಾನಿಯರ ಖಾತೆಗೆ ಹಣ ಜಮೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆಗಸ್ಟ್ 16 ಅಥವಾ 17 ರಂದು ಮನೆಯ ಯಜಮಾನಿಯ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ ಹಣ ಜಮಾ ಆಗಲಿದೆ.
ಅರ್ಜಿ ಸಲ್ಲಿಸುವ ಮೊದಲು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಳ್ಳಬೇಕು, ಮನೆ ಯಜಮಾನಿ ಮೃತಪಟ್ಟರೆ ..ನಂತರದ ಮನೆ ಯಜಮಾನಿ ಯಾರು..? ಅವರ ಹೆಸರನ್ನು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಂಡು ನಂತರ ಅರ್ಜಿ ಸಲ್ಲಿಸಬೇಕು. ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಯಾವ ಮಹಿಳೆಯ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದನ್ನು ಬದಲಾವಣೆ ಮಾಡಿಕೊಂಡರೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತೆ, ಯೋಜನೆಗೆ ಕಡೆ ದಿನಾಂಕ ತಿಳಿಸದೇ ಇರುವುದರಿಂದ ಎಲ್ಲಾ ದಾಖಲೆ ಸರಿಪಡಿಸಿಕೊಂಡು ತಿದ್ದುಪಡಿ ಮಾಡಿಕೊಂಡು ಅರ್ಜಿ ಸಲ್ಲಿಸುವುದು ಒಳ್ಳೆಯದು.