
ಹೈದರಾಬಾದ್ ಹಾಗೂ ಬೆಂಗಳೂರು ನಡುವೆ ಸಂಚರಿಸಲಿರುವ ಹೊಸ ರೈಲು ಆಗಸ್ಟ್ ಅಂತ್ಯಕ್ಕೆ ಸಂಚಾರ ಆರಂಭಿಸಲಿದೆ.
ಈಗಾಗಲೇ ಕಾಚಿಗುಡ-ಧೋನ್ವರೆಗೆ ಪ್ರಾಯೋಗಿಕ ಸಂಚಾರ ಪೂರ್ಣಗೊಂಡಿದ್ದು ಯಶವಂತಪುರ-ಹೈದರಾಬಾದ್ ನಡುವೆ ಹೊಸ ರೈಲು ಸಂಚರಿಸಲಿದೆ. ಶೀಘ್ರದಲ್ಲೇ ಯಶವಂತಪುರವರೆಗೆ ಪ್ರಾಯೋಗಿಕ ಸಂಚಾರ ಪೂರ್ಣಗೊಳ್ಳಲಿದೆ. ಆಗಸ್ಟ್ ಅಂತ್ಯದೊಳಗೆ ಸಾರ್ವಜನಿಕ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ. ಹೊಸ ರೈಲು ಬೆಳಗ್ಗೆ ಕಾಚಿಗುಡದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ತಲುಪಲಿದೆ. ಬಳಿಕ 2 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ ವೇಳೆಗೆ ಕಾಚಿಗುಡ ಬರಲಿದೆ/

