HomeKarnatakaBIG NEWS: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ FIR ದಾಖಲು

BIG NEWS: ಬೆಂಗಳೂರಿನ ಇನ್ಸ್ ಪೆಕ್ಟರ್ ಸೇರಿ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ FIR ದಾಖಲು

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ಸೈಬರ್ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಕೇರಳದಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಕಲ್ಲಂಚೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗಕೊಡಿಸುವುದಾಗಿ ಹೇಳಿ ದುಷ್ಕರ್ಮಿಗಳ ತಂಡವೊಂದು ಸಾಫ್ಟ್ ವೇರ್ ಇಂಜಿನಿಯರ್ ಗೆ 26 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದ ಆರೋಪಿಗಳ ಬೆನ್ನು ಹತ್ತಿದ ಪೊಲೀಸರು ಮಡಿಕೇರಿ, ಕೇರಳದಲ್ಲಿ ಪರಿಶೀಲನೆ ನಡೆಸಿದ್ದರು.

ಪ್ರಕರಣದ ಮೂಲ ಆರೋಪಿ ಕೇರಳದ ನೌಶಾದ್ ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಇನ್ಸ್ ಪೆಕ್ಟರ್ ಶಿವಪ್ರಕಾಶ್ ಹಾಗೂ ತಂಡ ಮುಂದಾಗಿದೆ. ಈ ವೇಳೆ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಕೇಸ್ ಮುಚ್ಚಿ ಹಾಕಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂಗಡ ಹಣವಾಗಿ 3.95 ಲಕ್ಷ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದು, ಈ ಕುರಿತು ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದಾನೆ. ಬೆಂಗಳೂರು ಪೊಲೀಸರು ತಾವು ಪ್ರಕರಣವೊಂದರ ತನಿಖೆಗೆ ಬಂದಿದ್ದಾಗಿ ಹೇಳಿದ್ದಾರೆ. ಆದರೂ ಕೇಲದ ಕೊಲ್ಲಂಚೇರಿ ಪೊಲಿಸರು ಇನ್ಸ್ ಪೆಕ್ಟರ್ ಶಿವಪ್ರಕಾಶ್ ಸೇರಿ ಮೂವರ ವಿರುದ್ಧ ಎಫ್.ಐ.ಆರ್ ದಾಖಲಿಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular