Bengaluru : ಮನೆಯವರ ಮೇಲಿದ್ದ ಸೇಡಿಗೆ ಇಬ್ಬರು ಹೆಣ್ಣು ಮಕ್ಕಳಿಗೆ ವಿಷಪ್ರಾಷನ ಮಾಡಿದ ದುಷ್ಕರ್ಮಿಗಳು

ಬೆಂಗಳೂರು ಗ್ರಾಮಾಂತರ: ಮನೆಯವರ ಮೇಲಿದ್ದ ದ್ವೇಷಕ್ಕೆ ಇಬ್ಬರು ಹೆಣ್ಣು ಮಕ್ಕಳಿಗೆ ದುಷ್ಕರ್ಮಿಗಳು
ವಿಷಪ್ರಾಷನ ಮಾಡಿದ ಘಟನೆ ಜಿಲ್ಲೆಯ ದೇವನಹಳ್ಳಿ ಬಳಿಯ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ.

ಪಂಚಾಯ್ತಿ ಅಧ್ಯಕ್ಷ ಸ್ಥಾನದ ಚುನಾವಣೆ ಸೇಡಿನಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ ಎರಡು ದಿನಗಳಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳಿಗೆ ದುಷ್ಕರ್ಮಿಗಳು ವಿಷಪ್ರಾಷನ ಮಾಡಿಸಿದ್ದು, ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಬ್ಬರು ಮಕ್ಕಳು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸದ್ಯ. ಇಬ್ಬರು ಹೆಣ್ಣುಮಕ್ಕಳಿಗೆ ದೇವನಹಳ್ಳಿಯ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read