ಮೇಕೆ ಮೇಯಿಸಲು ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ; ಕುಲುಮೆಯೊಳಗೆ ಇನ್ನಷ್ಟು ಶವಗಳು: ಗ್ರಾಮಸ್ಥರ ಅನುಮಾನ

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ 12 ವರ್ಷದ ಬಾಲಕಿಯ ಸುಟ್ಟ ಶವ ಪತ್ತೆಯಾಗಿದೆ. ಜಿಲ್ಲೆಯ ಕೊಟ್ರಿ ಪಟ್ಟಣದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕುಲುಮೆಗೆ ಎಸೆದಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿ ಬುಧವಾರ ಮಧ್ಯಾಹ್ನ ಮೇಕೆ ಮೇಯಿಸಲು ಗ್ರಾಮದ ಹೊಲಕ್ಕೆ ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಐದು ಕಲ್ಲಿದ್ದಲು ಕುಲುಮೆ ಪ್ರದೇಶಕ್ಕೆ ಬಂದಿದ್ದಾರೆ.

ಗ್ರಾಮಸ್ಥರು ಕುಲುಮೆಯ ಬಳಿ ಬಳೆಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕಲ್ಲಿದ್ದಲು ಕುಲುಮೆಗೆ ಎಸೆದು ಸಜೀವ ದಹನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇನ್ನೂ ಹೆಚ್ಚಿನ ದೇಹಗಳು ಒಳಗೆ ಇರಬಹುದೆಂದು ಕೆಲವರು ಹೇಳಿದ್ದಾರೆ. ನಂತರ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳಕ್ಕೆ ಆಗಮಿಸಿದೆ. ಶ್ವಾನ ದಳವನ್ನೂ ಕರೆಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ನಾಯಕ ವಿಕ್ರಮ್ ಗೌಡ್ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ, ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆ ತಮಾಷೆಯಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read