ಮಡಿಕೇರಿ: ಕೊಡಗು ಜಿಲ್ಲೆ ಕುಶಲನಗರದ ಹಾರಂಗಿ ಜಲಾಶಯ ಬಳಿ ಸೆಲ್ಫಿ ತೆಗೆಯಲು ಹೋದ ಪ್ರವಾಸಿಗ ನೀರು ಪಾಲಾಗಿದ್ದಾರೆ.
ಬೆಂಗಳೂರು ಮೂಲದ ಸಂದೀಪ್ ನೀರು ಪಾಲಾದವರು ಎಂದು ಹೇಳಲಾಗಿದೆ. ಹಾರಂಗಿ ಜಲಾಶಯದ ಮುಂಭಾಗ ಸೇತುವೆ ಬಳಿ ಘಟನೆ ನಡೆದಿದೆ. ಮೂವರು ಸ್ನೇಹಿತರ ಜೊತೆಗೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದರು. ಸೆಲ್ಫಿ ತೆಗೆದುಕೊಳ್ಳುವಾಗ ನೀರುಪಾಲಾಗಿದ್ದಾರೆ ಎನ್ನಲಾಗಿದೆ.
ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸಂದೀಪ್ ಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.