HomeKarnatakaಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ನೀಡಲು ಒತ್ತಾಯ

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವವರೆಗೆ ದಿನಸಿ ಸಾಮಗ್ರಿ ನೀಡುವಂತೆ ಒತ್ತಾಯಿಸಿ ಕಾಲೇಜಿನ ಪ್ರಾಚಾರ್ಯರಿಗೆ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿರುವ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆ ಒಳಗೊಂಡ ಮನವಿ ಪತ್ರ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದು ಮೂರು ತಿಂಗಳಿನಿಂದ ವೇತನ ಬಾರದೆ ಅತಿಥಿ ಉಪನ್ಯಾಸಕರು ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಕುಟುಂಬ ನಿರ್ವಹಣೆಗಾಗಿ 25 ಕೆಜಿ ಅಕ್ಕಿ, 10 ಕೆಜಿ ಈರುಳ್ಳಿ, ಟೊಮೆಟೊ, ಹಸಿಮೆಣಸಿನಕಾಯಿ, ಬೇಳೆ, ಬೆಳ್ಳುಳ್ಳಿ, ಶುಂಠಿ, ಅಗತ್ಯ ಇರುವಷ್ಟು ಹಾಲು, ಮೊಸರು, ಒಂದು ಎಲ್ಪಿಜಿ ಸಿಲಿಂಡರ್ ನೀಡಬೇಕೆಂದು ಅತಿಥಿ ಉಪನ್ಯಾಸಕರು ಪ್ರಾಂಶುಪಾಲರಿಗೆ ಮನವಿ ಮಾಡಿದ್ದಾರೆ.

ಮೂರು ತಿಂಗಳಿಂದ ಗೌರವಧನ ಬಿಡುಗಡೆಯಾಗದೆ ಜೀವನ ಹಾಗೂ ಕುಟುಂಬ ನಿರ್ವಹಣೆ ಕಷ್ಟವಾಗಿದ್ದು, ಇದನ್ನೇ ನಂಬಿಕೊಂಡ ನಮಗೆ ತೀವ್ರ ಸಂಕಷ್ಟ ಎದುರಾಗಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular