alex Certify ‘ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಅವಹೇಳನಕಾರಿ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಅವಹೇಳನಕಾರಿ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ ‘FIR’ ದಾಖಲು

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ನೀಡಲಾದ ದೂರಿನ ಅನ್ವಯ ಕೋರ್ಟ್ ಅನುಮತಿ ಪಡೆದು ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ.

ಉತ್ತರ ಕರ್ನಾಟಕದ ಜನರ ಬಗ್ಗೆ, ಖರ್ಗೆ ಮತ್ತು ಖಂಡ್ರೆ ಅವರ ಮೈಬಣ್ಣ ಹಂಗಿಸುವ ರೀತಿಯಲ್ಲಿ ಆರಗ ಜ್ಞಾನೇಂದ್ರ ಮಾತನಾಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ ಅರಣ್ಯದ ಬಗ್ಗೆ ಮಾಹಿತಿ ಇಲ್ಲದ ಉತ್ತರ ಕರ್ನಾಟಕದವರು ಗೃಹ ಸಚಿವರಾಗುತ್ತಿರುವುದು ನಮ್ಮ ದುರ್ದೈವ. ಮರ-ಗಿಡ ಏನೆಂದು ಅವರಿಗೆ ಗೊತ್ತಿಲ್ಲ. ಸುಟ್ಟು ಕರಕಲಾಗಿರುವ ಮನುಷ್ಯರ ಮುಖ ನೋಡಿದರೆ ಗೊತ್ತಾಗುತ್ತದೆ. ಅವರಿಗೆ ತಲೆ ಕೂದಲು ಇರುವುದರಿಂದ ಸ್ವಲ್ಪ ಪರವಾಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಆರಗ ಜ್ಞಾನೇಂದ್ರ ಅವರ ಹೇಳಿಕೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಣ್ಣದ ಆಧಾರದಲ್ಲಿ ಅವಮಾನ ಮಾಡಿರುವ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ತಮ್ಮ ಪಕ್ಷದ ಮನುವಾದದಲ್ಲಿನ ವರ್ಣಾಶ್ರಮದ ಬಗೆಗಿನ ಪ್ರೀತಿ ಮತ್ತು ದಮನಿತರ ವಿರುದ್ಧದ ಮನಸ್ಥಿತಿಯನ್ನು ಜ್ಞಾನೇಂದ್ರ ತೆರೆದಿಟ್ಟಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿ ವ್ಯಾಪಕ ಪ್ರತಿಭಟನೆ ನಡೆಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...