alex Certify ಗಮನಿಸಿ : ‘ಇಂಡಿಯನ್ ಮಿಲಿಟರಿ’ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಇಂಡಿಯನ್ ಮಿಲಿಟರಿ’ ಕಾಲೇಜು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2024 ನೇ ಸಾಲಿನ ಜುಲೈ ಅಧಿವೇಶನಕ್ಕಾಗಿ ಡೆಹರಾಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್(ಆರ್ಐಎಂಸಿ) ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ದಿನಾಂಕ: 02-12-2023 ರಂದು ನಡೆಸಲಿದ್ದು ಅರ್ಜಿ ಸಲ್ಲಿಸಲು ದಿ: 15-10-2023 ಕಡೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂ.ಸಂ: 080-25589459 ಹಾಗೂ ವೆಬ್ ಸೈಟ್ www.rimc.gov.in ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...