alex Certify BIGG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,ಪರಿಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಧಿಕಾರಿ/ನೌಕರರಿಗೆ ಪ್ರೋತ್ಸಾಹ ಧನ ಪಾವತಿಸುವಂತೆ ಆದೇಶಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರಿ ಆದೇಶಗಳಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಜಾರಿಗೆ ಬಂದ ದಿನಾಂಕ 22.03.2012 ರಂದು ಸೇವೆಯಲ್ಲಿದ್ದು, ದಿನಾಂಕ 17.04.20210 ಪರಿಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಧಿಕಾರಿ/ನೌಕರರಿಗೆ ಪ್ರೋತ್ಸಾಹ ಧನ ಪಾವತಿಸುವಂತೆ ಆದೇಶಿಸಲಾಗಿದೆ.

ಅದರಂತೆ ತಮ್ಮ ಕಛೇರಿಯಲ್ಲಿ (ಅಧೀನ ಉಪ ಖಜಾನಗಳನ್ನೊಳಗೊಂಡು) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಇದುವರೆವಿಗೂ ಪ್ರೋತ್ಸಾಹ ಧನವನ್ನು ಪಡೆಯದೇ ಇರುವ ಅರ್ಹ ಅಧಿಕಾರಿಗಳು/ನೌಕರರು ಹಾಜರು ಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪ್ರಮಾಣ ಪತ್ರವನ್ನು ಪರಿಶೀಲಿಸಿ, ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಅವರಿಗೆ ಪ್ರೋತ್ಸಾಹ ಧನವನ್ನು ಪಾವತಿಸುವ ಸಲುವಾಗಿ ಲೆಕ್ಕಶೀರ್ಷಿಕ 2054-00-095-0-01 ಆಬೆಕ್ಸ್ ಕೂಡ 015 ರಡಿಯಲ್ಲಿ ಬೇಕಾಗುವ ಅನುದಾನದ ಮಾಹಿತಿಯೊಂದಿಗೆ ದಿನಾಂಕ 05.08.2023ರ ಒಳಗಾಗಿ ಆಯುಕ್ತಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...