HomeKarnatakaಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ಮಹಿಳೆಯನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ತುಮಕೂರು: ವ್ಯಕ್ತಿಯೋರ್ವ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಲಕ್ಷ್ಮಮ್ಮ ಕೊಲೆಯಾದ ಮಹಿಳೆ. ದಾವಣಗೆರೆ ಮೂಲದ ಮಂಜುನಾಥ್ ಮಹಿಳೆಯನ್ನು ಕೊಂದ ಆರೋಪಿ. ಲಕ್ಷ್ಮಮ್ಮ ವಿವಾಹವಾಗಿ ಪತಿಯಿಂದ ದೂರವಿದ್ದಳು. ಲಕ್ಷ್ಮಮ್ಮ ಹಾಗೂ ಮಂಜುನಾಥ್ ನಿನ್ನೆ ತುಮಕೂರಿನ ದಿವ್ಯ ಲಾಡ್ಜ್ ನಲ್ಲಿ ತಂಗಿದ್ದರು. ಇಂದು ಮಂಜುನಾಥ್, ಮಹಿಳೆಯ ಕತ್ತು ಹಿಸುಕಿ ಆಕೆಯನ್ನು ಕೊಲೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃತ್ಯದ ಬಳಿಕ ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular