HomeKarnatakaಅಂಚೆಯಣ್ಣನ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಅಂಚೆಯಣ್ಣನ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಶಿವಮೊಗ್ಗ: ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ.

ಭಾರತೀಯ ಅಂಚೆ ಇಲಾಖೆ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ವಿಶಿಷ್ಟ ಸೇವೆಗೆ ಚಾಲನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿನಲ್ಲಿ ಪಡೆಯಲು ಮಹಾನಗರ ಪಾಲಿಕೆ ಜನನ/ಮರಣ ಕೌಂಟರ್ ನಲ್ಲಿ ನಿಗದಿತ ನಮೂನೆ ಅರ್ಜಿ ಪಡೆದು, ನಿಮ್ಮ ವಿಳಾಸವನ್ನು ನಮೂದಿಸಿ ಕೋರಿಕೆಯನ್ನು ಸಲ್ಲಿಸಬಹುದಾಗಿದೆ.  ಪ್ರಮಾಣ ಪತ್ರವನ್ನು ಅಂಚೆ ಇಲಾಖೆಯ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಲಾಗುವುದು. ವಿಳಾಸದಾರರು ಬಟಾವಡೆಯ ಸಮಯದಲ್ಲಿ 80 ರೂ. ಪಾವತಿಸಿ ಜನನ/ಮರಣ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಅಂಚೆ ಅಧೀಕ್ಷಕರಾದ ಜಯರಾಮ ಶೆಟ್ಟಿ. ಜಿ. ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular