ಬೆಂಗಳೂರು: ಆ. 25 ರಂದು ವರಮಹಾಲಕ್ಷ್ಮಿ ಹಬ್ಬ ಇದೆ. ಅದರ ಹಿಂದಿನ ದಿನ ಅಂದರೆ ಆ. 24 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ ಮಾಡಲಾಗುವುದು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಬಗ್ಗೆ ಮಾಹಿತಿ ನೀಡಿ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24 ರಂದು ಚಾಲನೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2000 ರೂ. ಗಳನ್ನು ಈ ಯೋಜನೆಯಡಿ ನೀಡಲಾಗುವುದು. ನಾವು ಜನರ ಕೈಗೆ ದುಡ್ಡು ನೀಡುತ್ತದ್ದೇವೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಕೆ ಜಾಸ್ತಿಯಾಗುತ್ತದೆ. ಐದು ಗ್ಯಾರಂಟಿಗಳಿಂದ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆಯಲಿದ್ದು, ಈ ರೀತಿ 48 ರಿಂದ 60 ಸಾವಿರ ರೂಪಾಯಿ ವಾರ್ಷಿಕವಾಗಿ ಜನರಿಗೆ ಲಭಿಸಲಿದೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಗ್ಯಾರಂಟಿ ಜಾರಿಯ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನೂ ಜಾರಿ ಮಾಡುತ್ತಿದ್ದೇವೆ. ಸಮೃದ್ಧ, ಸೌಹಾರ್ದ, ಸ್ವಾಭಿಮಾನಿ ಕರ್ನಾಟಕ ಮತ್ತೆ ಪ್ರಜ್ವಲಿಸುವಂತೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.