HomeBusinessಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಜು. 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಎಂದಿನಂತೆ ಕರೆಂಟ್ ಬಿಲ್

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಜು. 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಎಂದಿನಂತೆ ಕರೆಂಟ್ ಬಿಲ್

ಗೃಹಜ್ಯೋತಿ ಯೋಜನೆಯಡಿ ನೋಂದಣಿ ಆಗಿರುವ ಕೆಲವು ಗ್ರಾಹಕರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಬದಲಿಗೆ ಬಳಕೆ ಮಾಡಿದ ವಿದ್ಯುತ್ ಬಿಲ್ ನೀಡಲಾಗಿದೆ.

ಇಂಧನ ಇಲಾಖೆಯ ಆದೇಶದ ಅನ್ವಯ ಜುಲೈ 27ಕ್ಕೆ ಮೊದಲೇ ನೋಂದಣಿ ಮಾಡಿಸಿಕೊಂಡಿದ್ದರೂ ಎಂದಿನಂತೆಯೇ ಬಿಲ್ ಬಂದಿದ್ದು, ಕೆಲವು ಗ್ರಾಹಕರು ಬಿಲ್ ಪಾವತಿಸಬೇಕೆ, ಬೇಡವೇ ಎನ್ನುವ ಗೊಂದಲದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಪಡೆದ 2.16 ಕೋಟಿ ಗ್ರಾಹಕರಲ್ಲಿ 2.14 ಕೋಟಿ ಮಂದಿ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುತ್ತಿದ್ದು, ಇದುವರೆಗೆ 1.41 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿವೆ. ಇವರೆಲ್ಲರಿಗೂ ಆಗಸ್ಟ್ ನಿಂದ ಶೂನ್ಯ ಬಿಲ್ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಜುಲೈ 27ಕ್ಕೆ ಮೊದಲೇ ನೋಂದಾಯಿಸಿದ್ದರೂ ಶೂನ್ಯ ಬಿಲ್ ಪಡೆಯುವ ಭಾಗ್ಯ ಸಿಕ್ಕಿಲ್ಲ. ಜು. 27 ರ ನಂತರ ನೋಂದಾಯಿಸಿದವರಿಗೆ ಆಗಸ್ಟ್ ನಲ್ಲಿ ಶೂನ್ಯ ಬಿಲ್ ಬರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular