HomeKarnatakaಮಹಿಳೆಯರ ಖಾತೆಗೆ 2,000 ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ 15 ದಿನದಲ್ಲೇ ಒಂದು ಕೋಟಿಗೂ ಅಧಿಕ...

ಮಹಿಳೆಯರ ಖಾತೆಗೆ 2,000 ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ 15 ದಿನದಲ್ಲೇ ಒಂದು ಕೋಟಿಗೂ ಅಧಿಕ ನೋಂದಣಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಚಾಲನೆ ನೀಡಿದ್ದರು. ಜುಲೈ 20ರಂದು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, 1.28 ಕೋಟಿ ಫಲಾನುಭವಿಗಳಿದ್ದಾರೆ. ನೋಂದಣಿ ಪ್ರಕ್ರಿಯೆ ಆರಂಭವಾದ 15 ದಿನಗಳ ಅವಧಿಯಲ್ಲಿ ಒಂದು ಕೋಟಿಗೂ ಅಧಿಕ ಮಹಿಳೆಯರು ಹೆಸರು ನೋಂದಾಯಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಯಾವುದೇ ಶುಲ್ಕ ನೀಡದೆ ಮಹಿಳೆಯರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಆಗಸ್ಟ್ 24ರಂದು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೃಹಿಣಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular