
ಜೈಲಿನಿಂದ ಬಿಡುಗಡೆಯಾಗಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಹೊಸೂರು ವೃತ್ತದಲ್ಲಿ ಮಚ್ಚಿನಿಂದ ರೌಡಿ ಮಹೇಶ್ ತಲೆಗೆ ಹೊಡೆದು ಬರ್ಬರವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ರೌಡಿ ವಿಲ್ಸನ್ ಗಾರ್ಡ್ ನಾಗ ಮತ್ತಿತರರು ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.

