ನವದೆಹಲಿ: ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ ಸ್ಟೇಷನ್ ಯೋಜನೆಗೆ ಚಾಲನೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದು, 508 ರೈಲು ನಿಲ್ದಾಣಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಂತೆ ಮೇಲ್ದರ್ಜೆಗೇರಿಸುವ ಯೋಜನೆ ಇದಾಗಿದೆ.
ರಾಜ್ಯದ 13 ರೈಲು ನಿಲ್ದಾಣಗಳನ್ನು ಈ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಸನದ ಅರಸಿಕೆರೆ, ಗದಗ, ಗೋಕಾಕ್, ಧಾರವಾಡ, ಕೊಪ್ಪಳ, ಕಲಬುರ್ಗಿ, ಶಹಬಾದ್, ಗಾಣಗಾಪುರ, ಬೀದರ್, ಬಳ್ಳಾರಿ, ಮೈಸೂರು, ಹರಿಹರ, ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ.
ಮೂಲಸೌಕರ್ಯ ಅಭಿವೃದ್ಧಿ, ಮಹಾನಗರಗಳೊಂದಿಗೆ ಸಂಪರ್ಕ, ಚಿಲ್ಲರೆ ಮಾರಾಟ ಮಳಿಗೆ, ಒನ್ ಸ್ಟೇಷನ್ ಒನ್ ಪ್ರಾಡಕ್ಟ್ ಮಳಿಗೆ ಸ್ಥಾಪನೆ ಸೇರಿದಂತೆ ಹಲವು ಸೌಲಭ್ಯಗಳು ಇದರಲ್ಲಿ ಒಳಗೊಂಡಿವೆ. 24 ಸಾವಿರ ಕೋಟಿ ವೆಚ್ಚದಲ್ಲಿ ದೇಶದ 508 ನಿಲ್ದಾಣಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದೆ.