ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು.ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು, ಇದೀಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹಾಗೆಯೇ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿ ಸ್ಥಾನದಿಂದ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.