alex Certify `ಕಿಂಗ್ ಮೇಕರ್ ಕನಸು ನುಚ್ಚನೂರುಗೊಂಡು ಭಗ್ನಪ್ರೇಮಿಯಂತೆ ಕುಮಾರಸ್ವಾಮಿ ವ್ಯಗ್ರರಾಗಿದ್ದಾರೆ’ : ದಿನೇಶ್ ಗುಂಡೂರಾವ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ಕಿಂಗ್ ಮೇಕರ್ ಕನಸು ನುಚ್ಚನೂರುಗೊಂಡು ಭಗ್ನಪ್ರೇಮಿಯಂತೆ ಕುಮಾರಸ್ವಾಮಿ ವ್ಯಗ್ರರಾಗಿದ್ದಾರೆ’ : ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದರು. ಆದರೆ ಕನಸು ನುಚ್ಚುನೂರಾಗಿ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್,  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDKಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?

HDKಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ.ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ.ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. HDKಯವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು? ಎಂದು ವ್ಯಂಗ್ಯವಾಡಿದ್ದಾರೆ.

HDKಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ HDK ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ HDK, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...