HomeKarnatakaಕೆಲಸದಿಂದ ವಜಾಗೊಂಡಿದ್ದ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಅರೆಸ್ಟ್

ಕೆಲಸದಿಂದ ವಜಾಗೊಂಡಿದ್ದ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಅರೆಸ್ಟ್

ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಅವರನ್ನು ಚಿತ್ರದುರ್ಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಡಲಗಿರಿಯಪ್ಪ ವಿವಿಧ ಕಾಮಗಾರಿಗಳ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಿದ್ದರು. ಬೇನಾಮೆ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ಗುಳುಂ ಮಾಡಿದ್ದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣ ಅವರು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಸಿಇಎನ್ ಠಾಣೆಗೆ ವರ್ಗಾವಣೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಡಲಗಿರಿಯಪ್ಪ ಅವರನ್ನು ಚಿತ್ರದುರ್ಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿರ್ಮಿತಿ ಕೇಂದ್ರದ ಹಣ ಲಪಟಾಯಿಸಿದ ಪ್ರಕರಣದಲ್ಲಿ ಮೂಡಲಗಿರಿಯಪ್ಪ ಅವರನ್ನು ತಿಂಗಳ ಹಿಂದೆಯಷ್ಟೇ ಡಿಸ್ ಮಿಸ್ ಮಾಡಲಾಗಿತ್ತು, ಅವರ ವಿರುದ್ಧ ಮತ್ತೊಂದು ದೂರು ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular