alex Certify ಮತ್ತೆ ಸಂಸದರಾಗಿ ಲೋಕಸಭೆಗೆ ರಾಹುಲ್ ಗಾಂಧಿ ಎಂಟ್ರಿ…? ಇಂದು ನಿರ್ಧಾರ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಸಂಸದರಾಗಿ ಲೋಕಸಭೆಗೆ ರಾಹುಲ್ ಗಾಂಧಿ ಎಂಟ್ರಿ…? ಇಂದು ನಿರ್ಧಾರ ಸಾಧ್ಯತೆ

ನವದೆಹಲಿ: ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಮರು ಸ್ಥಾಪನೆ ಕುರಿತಾಗಿ ಲೋಕಸಭೆ ಕಾರ್ಯಾಲಯ ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿಯವರ ಲೋಕಸಭೆ ಸದಸ್ಯತ್ವ ಮರು ಸ್ಥಾಪನೆ ಮಾಡುವ ಆದೇಶ ಇಂದು ಹೊರಬೀಳುವ ಕುರಿತಾಗಿ ಕುತೂಹಲ ಹೆಚ್ಚಾಗಿದೆ.

ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ್ದು, ಮರು ದಿನವೇ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. ಈ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಅನರ್ಹಗೊಳಿಸಿದಷ್ಟು ವೇಗದಲ್ಲೇ ಅದನ್ನು ರದ್ದು ಮಾಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಭಾನುವಾರ ರಜೆ ಇದ್ದ ಕಾರಣ ಸೋಮವಾರ ಸಂಸತ್ ಕಲಾಪ ಆರಂಭವಾಗಲಿದ್ದು, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಆದೇಶ ರದ್ದುಪಡಿಸಿ ಸಂಸದರಾಗಿ ಮರುಸ್ಥಾಪನೆ ಮಾಡುವ ಆದೇಶ ಹೊರಡಿಸುವ ಸಾಧ್ಯತೆ ಇದೆ. ಸದಸ್ಯತ್ವ ಮರಳಿಸುವ ಬಗ್ಗೆ ಲೋಕಸಭೆ ಸ್ಪೀಕರ್ ನಿರ್ಧಾರ ಕೈಗೊಳ್ಳಲು ಕಾಲಮಿತಿ ಇಲ್ಲ. ಈ ಹಿಂದೆ ಲಕ್ಷ ದ್ವೀಪದ ಅನರ್ಹ ಸಂಸದ ಮಹಮ್ಮದ್ ಫೈಝಲ್ ಅವರಿಗೆ ಅರ್ಜಿ ಸಲ್ಲಿಸಿದ ಎರಡು ತಿಂಗಳ ನಂತರ ಲೋಕಸಭೆ ಸದಸ್ಯತ್ವ ಮರಳಿ ನೀಡಲಾಗಿತ್ತು. ವಿಳಂಬ ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಗೆ ಹೋದ ಹಿನ್ನೆಲೆಯಲ್ಲಿ ಸದಸ್ಯತ್ವ ಮರಳಿಸಲಾಗಿತ್ತು. ರಾಹುಲ್ ಗಾಂಧಿ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...