ಬೆಂಗಳೂರು : ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಟೊಮೆಟೊ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.15 ಕೆಜಿ ಟೊಮೆಟೊ ಬಾಕ್ಸ್ ಇಂದು 1,500 ರೂ.ವರೆಗೆ ಮಾರಾಟವಾಗಿದೆ.
ಹೌದು, ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಜನಸಾಮಾನ್ಯರಿಗೆ ರಿಲೀಫ್ ಸಿಕ್ಕಂತಾಗಿದೆ. 15 ಕೆಜಿ ಟೊಮೆಟೊ ಬಾಕ್ಸ್ ಬೆಲೆ ಕಳೆದ ನಾಲ್ಕು ದಿನಗಳಿಂದ 1,000 ರೂ.ವರೆಗೆ ಇಳಿಕೆಯಾಗಿದೆ.
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆಜಿ ಟೊಮೆಟೊ ಬಾಕ್ಸ್ 2,700 ರೂ.ನಿಂದ 1,500 ರೂ.ಗೆ ಕುಸಿದಿದೆ.ಕಳೆದ ನಾಲ್ಕು ದಿನಗಳಿಂದ ಅಂದಾಜು 1,000 ರೂ.ಕುಸಿತವಾಗಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇರೆ ರಾಜ್ಯಗಳಿಂದ ಟೊಮೆಟೊ ಬಂದಿರುವ ಹಿನ್ನೆಲೆಯಲ್ಲಿ ಟೊಮೆಟೊ ಬೆಲೆ ಇಳಿಕೆಯಾಗಿದೆ. ಇಂದು 15 ಕೆಜಿ ಟೊಮೆಟೊ ಬಾಕ್ಸ್ ಬೆಲೆ 1,500 ರೂ. ವರೆಗೆ ಮಾರಾಟವಾಗಿದೆ.
ಒಂದು ವಾರದ ಹಿಂದೆಯಷ್ಟೇ ಟೊಮೆಟೋ ಕೆಜಿ ಬೆಲೆ 200 ರೂಪಾಯಿ ಸನೀಹಕ್ಕೆ ತಲುಪಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಟೊಮೆಟೋ ಬೆಲೆ ಹಂತ ಹಂತವಾಗಿ ಇಳಿಕೆಯತ್ತ ಸಾಗುತ್ತಿದೆ. ಇಂದು ಸಹ ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಕೊಂಚ ಇಳಿಕೆಯಾಗಿದೆ. ಒಂದು ಕೆಜಿ ಟೊಮೆಟೋ ಬೆಲೆಯಲ್ಲಿ 10 ರಿಂದ 20 ರೂ.ಗಳವರೆಗೆ ಇಳಿಕೆ ಕಂಡಿದೆ.
ಕಳೆದ ಎರಡು ದಿನಗಳಿಂದ ಕೆಜಿ ಟೊಮೆಟೋ 130ರಿಂದ 150 ರೂಪಾಯಿಗೆ ಮಾರಾಟವಾಗುತ್ತಿತ್ತು. ಇದೀಗ ಮಾರುಕಟ್ಟೆಯಲ್ಲಿ 90 ರಿಂದ 100 ರೂಗೆ ಒಂದು ಕೆಜಿ ಟೊಮೆಟೊ ಮಾರಾಟವಾಗುತ್ತಿದೆ