ರಾಜ್ಯದ ಶಾಲಾ ಮಕ್ಕಳಿಗೆ ನಿರಾಸೆ : ಬಿಸಿಯೂಟಕ್ಕೆ ಡಬಲ್ ಸಾಲ್ಟ್ , ಜೇನುತುಪ್ಪ ನೀಡಲು ಸಾಧ್ಯವಿಲ್ಲ ಎಂದ ಸರ್ಕಾರ

ಬೆಂಗಳೂರು : ಬಿಸಿಯೂಟದಲ್ಲಿ ಡಬಲ್ ಸಾಲ್ಟ್ , ಜೇನುತುಪ್ಪ ಬಳಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ರಾಜ್ಯ ಸರ್ಕಾರ ಸಾಧ್ಯವಿಲ್ಲವೆಂದು ಹೇಳಿದೆ.

ಇತ್ತೀಚೆಗಷ್ಟೇ ಕೇಂದ್ರವು ಪಿಎಂ ಪೋಷಣ್ ಯೋಜನೆಯಡಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ಅಡುಗೆಗೆ ಡಬಲ್ ಸಾಲ್ಟ್ ಬಳಸಲು ರಾಜ್ಯ ಸರಕಾರಕ್ಕೆ ಸೂಚಿಸಿತ್ತು., ಜೇನುತುಪ್ಪದಲ್ಲಿ ಹೆಚ್ಚಿನ ಪ್ರಮಾಣ ಪೌಷ್ಟಿಕಾಂಶ ಇರುವುದರಿಂದ ಅದನ್ನು ನೀಡಿ ಎಂದು ತಿಳಿಸಿತ್ತು. ಆದರೆ ಡಬಲ್ ಸಾಲ್ಟ್ ರಾಜ್ಯದಲ್ಲಿ ಬಳಕೆಯಲ್ಲಿ ಇಲ್ಲದೇ ಇರುವುದರಿಂದ ಖರೀದಿಗೆ ಸಿಗುತ್ತಿಲ್ಲ. ಹೀಗಾಗಿ ಇದನ್ನು ಅನುಷ್ಠಾನ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ.

ಅದೇ ರೀತಿ ರಾಜ್ಯದಲ್ಲಿ ಜೇನುತುಪ್ಪವಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ದೊರೆಯುವುದಿಲ್ಲ., ಆದ್ದರಿಂದ ಬಿಸಿಯೂಟದಲ್ಲಿ ಜೇನುತುಪ್ಪ ನೀಡಲು ಕೂಡ ರಾಜ್ಯ ಸರ್ಕಾರ ಸಾಧ್ಯವಿಲ್ಲವೆಂದು ಹೇಳಿದೆ. ಈ ಮೂಲಕ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಮತ್ತೆ ನಿರಾಸೆ ಮೂಡಿಸಿದೆ.

ಅದೇ ರೀತಿ ರಾಜ್ಯದ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ರಾಗಿ ಮುದ್ದೆ ಹಾಗೂ ಜೋಳದ ರೊಟ್ಟಿ ನೀಡಲು ಅಗತ್ಯವಿರುವ ಆಹಾರ ಧಾನ್ಯಗಳನ್ನು ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು.ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಲು ಸಿರಿಧಾನ್ಯ ಬಳಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿ ನೀಡಲು ಆಹಾರಧಾನ್ಯ ಖರೀದಿಗೆ ಅನುದಾನ ಕೋರಿ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಇಲಾಖೆ ಯಾವುದೇ ಕಾರಣ ನೀಡದೇ ಸಿರಿಧಾನ್ಯಗಳನ್ನು ಮಾತ್ರ ನೀಡಬೇಕು ಎಂದು ಸೂಚಿಸಿ ಶಿಕ್ಷಣ ಇಲಾಖೆಗೆ ಪತ್ರ ಬರೆದಿತ್ತು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read