ಮಂಡ್ಯ : ಲಂಚಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವ ಚಲುವರಾಯಸ್ವಾಮಿ ಅವರು 6 ರಿಂದ 8 ಲಕ್ಷ ರೂ.ವರೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.