ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಎದುರಾಗಿದೆ.
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಫೇಸ್ ಬುಕ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ನಟ ವಿಜಯ ರಾಘವೇಂದ್ರರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್ ರಾಘವೇಂದ್ರ ಮದುವೆಯಾಗಿದ್ದರು.